ಧರ್ಮಸ್ಥಳ, ನ.20: ಹೇರ್ ಸ್ಟೈಲೋ ಮೂಲಕ ಅಂತರಾಷ್ಟ್ರೀಯ ಹಿರಿಮೆಗೆ ಪಾತ್ರರಾದ ಮುಂಬಯಿನ ಖ್ಯಾತ ಕೇಶ ವಿನ್ಯಾಸಕಾರ, ಶಿವಾ'ಸ್ ಹೇರ್ ಡಿಝೈನರ್'ಸ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಡಾ| ಶಿವರಾಮ ಕೃಷ್ಣ ಭಂಡಾರಿ ಅವರ `ಸ್ಟೈಲಿಂಗ್ ಅಟ್ ದ ಟಾಪ್' ಕನ್ನಡ ಕೃತಿಯನ್ನು ಇಂದಿಲ್ಲಿ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳದ ಖಾವಂದರ ಬೀಡುನಲ್ಲಿ ಧರ್ಮಾಧಿಕಾರಿ ಪದ್ಮಭೂಷಣ ಡಾ| ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆ ಗೊಳಿಸಿ ಶುಭನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ಭಂಡಾರಿ ಮಹಾ ಮಂಡಲ ಇದರ ಸಂಸ್ಥಾಪಕಾಧ್ಯಕ್ಷ, ನಾಗೇಶ್ವರ ಸಿನಿ ಕ್ರಿಯೇಷನ್ಸ್‌ನ ಆಡಳಿತ ನಿರ್ದೇಶಕ ಕಡಂದಲೆ ಸುರೇಶ್ ಎಸ್. ಭಂಡಾರಿ, ಕೃತಿಕರ್ತೆ ಜಯಶ್ರೀ ಜಿ.ಶೆಟ್ಟಿ, ಕೃತಿಯ ಕನ್ನಡ ಅನುವಾದಕ ಶಿವಾನಂದ ಬೇಕಲ್, ರಾಷ್ಟ್ರೀಯ ಹಿರಿಮೆಯ ಪತ್ರಿಕಾ ಛಾಯಾಚಿತ್ರಕಾರ ಗೋಪಾಲ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಪ್ರೊ| ಎಂ.ಪಿ ಶ್ರೀನಾಥ್ ಅರಸಿನಮಕ್ಕಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ರಾಮಕೃಷ್ಣ ಭಟ್ ಬೇಳಾಲು ವಂದಿಸಿದರು.